Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ. ದಂಡ ಫಿಕ್ಸ್.!
KARNATAKA

ಬೆಂಗಳೂರಲ್ಲಿ ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ. ದಂಡ ಫಿಕ್ಸ್.!

By kannadanewsnow57

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ.

ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ  ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ  ಅವುಗಳನ್ನು ವಶಪಡಿಸಿಕೊಂಡು ಅಗತ್ಯ  ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು.

‘ಒಂಟೆ, ಗೋವುಗಳ ಹತ್ಯೆ ಮಾಡುವುದು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಣೆ ಮೂಲಕ ಜಿಲ್ಲೆಗೆ ತರುವುದು ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಕರಪತ್ರ ಹಾಗೂ ಆಟೊರಿಕ್ಷಾ ಪ್ರಚಾರ ಮೂಲಕ ಅರಿವು ಮೂಡಿಸಬೇಕು ಎಂದು  ತಿಳಿಸಿದ ಅವರು ನಗರದ ಹೊರ ವಲಯಗಳಲ್ಲಿ, ಅಂದರೆ ಮೈಸೂರು ರಸ್ತೆ (ಕುಂಬಳಗೂಡು), ತುಮಕೂರು ರಸ್ತೆ (ಎಕ್ಸಿಬ್ಯೂಷನ್ ಕೇಂದ್ರ) ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿ ಬೆಲೆ), ಹಳೆ ಮದ್ರಾಸ್ ರಸ್ತೆ (ಹೊಸಕೋಟೆ ಹತ್ತಿರ) ಸೇರದ ಒಟ್ಟು 10 ತಪಾಸಣಾ ಕೇಂದ್ರಗಳನ್ನು ಸಾರಿಗೆ ಇಲಾಖೆ ನೇತೃತ್ವದಲ್ಲಿ ನಿರ್ಮಿಸಿ, ಎಲ್ಲಾ ಕೇಂದ್ರಗಳಲ್ಲಿ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದರು.

ಅಕ್ರಮವಾಗಿ ಒಂಟೆ/ ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಬೆಂಗಳೂರು ನಗರ ಪಾಲಿಕೆಗಳ ಸಹಾಯವಾಣಿ 1533ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರ ವಹಿಸಬೇಕು.

ಪ್ರಾಣಿ ವಧೆಯಿಂದ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ನಿರ್ವಹಣೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಪಶುಪಾಲನ ಇಲಾಖೆಯ ಉಪ ನಿರ್ದೇಶಕ ಡಾ. ಪರಮೇಶ್ವರ್ ರವರು ಹಾಗೂ ಜಿ. ಬಿ. ಎ ಉಪ ನಿರ್ದೇಶಕರಾದ ಡಾ. ಚಂದ್ರಯ್ಯ ರವರು ಉಪಸ್ಥಿತರಿದ್ದರು.

7 years in jail Rs 10 lakh fine for illegal cow transport/slaughter in Bengaluru!
Share. Facebook Twitter LinkedIn WhatsApp Email

Related Posts

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

1 Min Read
Recent News

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

State News
KARNATAKA

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

By kannadanewsnow09 KARNATAKA 1 Min Read

ಬೆಂಗಳೂರು: ಪ್ರಧಾನ ಮಂತ್ರಿಗಳು ನಾಳೆ (ಮೇ 10, 2026) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕನಕಪುರ ರಸ್ತೆಯ ಊದಿಪಾಳ್ಯದ ಬಳಿ ಇರುವ…

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.