ಬೆಂಗಳೂರು: ರಾಜ್ಯದಲ್ಲಿ 1 ವರ್ಷದಲ್ಲಿ 12 ಬಂಡವಾಳ ಹೂಡಿಕೆಗೆ ಒಡಂಬಡಿಕೆಯನ್ನು ಸರ್ಕಾರದಿಂದ ಮಾಡಲಾಗಿದೆ. ಈ ಮೂಲಕ 70,950 ಉದ್ಯೋಗ ಸೃಷ್ಟಿ ನಿರೀಕ್ಷೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 12 ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಒಡಂಬಡಿಕೆಗಳು ಏರ್ಪಟ್ಟಿದ್ದು, ಇದರಿಂದ ಭವಿಷ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
‘ರಾಜ್ಯ ಸರ್ಕಾರ’ದಿಂದ ರಿಯಾಯಿತಿ ಪಡೆದು ‘ಸ್ಥಳೀಯರಿಗೆ ಉದ್ಯೋಗ’ ನೀಡದವರ ವಿರುದ್ಧ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು, ರಾಜ್ಯ ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೇ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯಿತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.