ಬೆಂಗಳೂರು : ಸದ್ಯ ರಾಜ್ಯದಲ್ಲಿ ವರುಣ ಅಬ್ಬರಿಸುತ್ತಿದ್ದು, ಇನ್ನೊಂದು ಕಡೆ ಡೆಂಘಿ ಕೂಡ ತನ್ನ ಆರ್ಭಟವನ್ನು ಮುಂದುವರೆಸಿದೆ. ಇದೀಗ ಕರ್ನಾಟಕದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಕೇಸ್‌ಗಳು ಪತ್ತೆಯಾಗಿವೆ. ಇನ್ನು ಸಿಎಂ ಸಿದ್ದರಾಮಯ್ಯ ಮುಂಜಾಗ್ರತೆ ಕೈಗೊಳ್ಳಲು ಟಾಸ್ಕ್ ಪೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದಾರೆ.
ಹೌದು ಇಂದು ವಿಧಾನಸೌಧದಲ್ಲಿ ಮಂಗಳವಾರ ಡಿಸಿ ಹಾಗೂ ಸಿಇಓಗಳ ಜೊತೆಗೆ ಸಭೆ ನಡೆಸಿದ ಸಿದ್ದರಾಮಯ್ಯ ಡಿಸಿ, ಸಿಇಒ ಹಾಗೂ ಡಿಹೆಚ್ಒ ಗಳು ಪ್ರತೀ ದಿನ ಸಮನ್ವಯದಿಂದ ಸಭೆ ನಡೆಸಿ ಡೆಂಗ್ಯೂ ಹರಡದಂತೆ ಕ್ರಮ ಕೈಗೊಳ್ಳಿ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯೂ ತಡೆಗಟ್ಟಬೇಕು ಏನು ಮಾಡಬೇಕು , ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಗ್ಯೂ ಹರಡದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗ್ಯೂ ಸೋಂಕಿತರಿಗೆ ಸೂಕ್ತವಾದ ಚಿಕಿತ್ಸೆ ಒದಗಿಸಬೇಕು. ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಡೆಂಗ್ಯೂ ಸೋಂಕಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಸೋಂಕಿತರ ಆರೋಗ್ಯದ ಮೇಲೆ ನಿಗಾ ಇಡಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಟಾಸ್ಕ್ ಫೋಸ್ ರಚಿಸಿ ಸಭೆ ನಡೆಸಬೇಕು ಮಳೆಗಾಲ ಮುಗಿಯುವ ತನಕ ಪ್ರತಿ ದಿನ ಸಭೆ ನಡೆಸಿ ಪರಿಶೀಲ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
7 ಸಾವು ಸಂಭವಿಸಿದೆರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಸಭೆಯಲ್ಲಿ ತಿಳಿಸಿದರು.