ಬೆಂಗಳೂರು: ಅನಧಿಕೃತವಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೀಗಿದ್ದೂ ನಿಯಮ ಮೀರಿ 74 ಗರ್ಭಪಾತ ಮಾಡಿದಂತ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಪಡೆದಂತ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತೊಂದೆಡೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿದ್ದಂತ ಶಸ್ತ್ರಚಿಕಿತ್ಸಾ ಕಡತವನ್ನು ಆರೋಗ್ಯ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ನೆಲಮಂಗಲದ ಬಿ.ಎಚ್. ರಸ್ತೆಯಲ್ಲಿರುವ ಆಸರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ನಡೆಸಿರುವುದು ಗೊತ್ತಾಯಿತು.
2021ರ ಸೆಪ್ಟೆಂಬರ್ 17ರಿಂದ 2026ರ ಸೆಪ್ಟೆಂಬರ್ 16ರವರೆಗೆ ಕೆಪಿಎಂಇ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡು ಆಸ್ಪತ್ರೆ ನಡೆಸಲಾಗುತ್ತಿದೆ. ಎಂಟಿಪಿ ಕಾಯ್ದೆ ಅಡಿಯಲ್ಲಿ ಪರವಾನಗಿ ಪಡೆಯದೆ ಗರ್ಭಪಾತ ನಡೆಸಲಾಗಿದೆ. ಇದು ವೈದ್ಯಕೀಯ ಗರ್ಭಪಾತ ಕಾಯ್ದೆ–1971 ಅನ್ನು ಉಲ್ಲಂಘಿಸಲಾಗಿದೆ ಎಂದು ದೂರು ನೀಡಿದ್ದರಿಂದ ಆಸರೆ ಆಸ್ಪತ್ರೆ ವೈದ್ಯ ಹಾಗೂ ಮಾಲೀಕ ಡಾ.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ಲೋಕಸಭಾ ಚುನಾವಣೆಗೆ ‘ಕರಡು ಪ್ರಣಾಳಿಕೆ’ ಸಲ್ಲಿಕೆ