ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. 7500 ಪ್ರಾಥಮಿಕ, 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅವರು ವಿಧಾನಪರಿಷತ್ತಿನಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. 12000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಶಿಕ್ಷಕರ ವರ್ಗಾವಣೆ ಮಾಡಿದ ನಂತ್ರ, ಶಿಕ್ಷಕರ ಕೊರತೆ ಎದುರಾಗಿದೆ. ನಾವು ಅತೀ ಹೆಚ್ಚು ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಕರನ್ನು ಕೊಟ್ಟಿದ್ದೇವೆ. 10000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 6500 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ ಎಂದರು.
52000 ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಯಾದಗಿರಿ, ರಾಯಚೂರು, ಗುಲ್ಪರ್ಗ ಜಿಲ್ಲೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ಸೇರಿದಂತೆ ಒಟ್ಟು 10,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ ಕಲಾಪದಲ್ಲಿ ತಿಳಿಸಿದ್ದಾರೆ.
ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ಸೇರಿದಂತೆ ಒಟ್ಟು 10,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ ಕಲಾಪದಲ್ಲಿ ತಿಳಿಸಿದ್ದಾರೆ.#assemblysession2024 @CMofKarnataka @siddaramaiah @Madhu_Bangarapp pic.twitter.com/NCPLaM6mES
— DIPR Karnataka (@KarnatakaVarthe) July 16, 2024
ಶಿವಮೊಗ್ಗ: ‘ರಾಷ್ಟ್ರೀಯ ಲೋಕ್ ಅದಾಲತ್’ನಲ್ಲಿ 12,548 ಪ್ರಕರಣ ಸಂಧಾನ, ಮತ್ತೆ ಹೊಂದಾದ 6 ದಂಪತಿಗಳು
ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ