ಬೆಂಗಳೂರು :ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯ ಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.
ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರ. ಇದು ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
ಹಿಂದಿನ ವರ್ಷಗಳಲ್ಲಿ ಕಲಬುರ್ಗಿ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬರ ಪರಿಹಾರದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.