ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪ್ರೌಢಶಾಲೆಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಂಜುನಾಥ್. ಬಿ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ನೆರೆದಿದ್ದ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋರಿದರು.
ಉಳವಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದಂತ ರಾಜಶೇಖರ್ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಮಹತ್ವ, ಗಣ್ಯರ ತ್ಯಾಗ ಬಲಿದಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುಹಿಸಿ ಕೊಟ್ಟರು.
ಈ ಸಂದರ್ಭದಲ್ಲಿ ಉಳವಿ ಪ್ರೌಢ ಶಾಲೆಯ ಪ್ರಾಂಶುಪಾಲರಾದ ರಾಮಪ್ಪ, ಸೋಮಶೇಖರ್ ಸೇರಿದಂತೆ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು ಸೇರಿದಂತೆ ಇತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಶಾಲಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಬಹುಮಾನವನ್ನು ಇಲಿಯಾಸ್ ವಿತರಿಸಿದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು