ಬೆಂಗಳೂರು : ರಾಜ್ಯ ಸರ್ಕಾರಿ ನೌಖರರ ಬಹುದಿನಗಳ ಬೇಡಿಕೆಯಾದ ರಾಜ್ಯ 7ನೇ ವೇತನ ಆಯೋಗದ ವರದಿ ಇಂದು ಸಲ್ಲಿಕೆಯಾಗಲಿದೆ.
ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ನಿಯೋಗವು 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಲಿದ್ದು, ಈ ನಡುವೆ ರಾಜ್ಯ 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾಗಲಿದೆ.