ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.
ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದರು.
ಈ ವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳ್ನು ವಿಲೇವಾರಿ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತ್ರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
‘X’ನಲ್ಲಿ #NammaBudget2024 ಪುಲ್ ಟ್ರೆಂಡಿಂಗ್: ಭಾರತದಲ್ಲಿ ನಂ.1 ‘ಹ್ಯಾಷ್ ಟ್ಯಾಗ್’ ಹೆಗ್ಗಳಿಕೆ