ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ ಬಹುದಿನಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದಂತ 7ನೇ ವೇತನ ಆಯೋಗದಂತೆ ವೇತನ ಜಾರಿಗೊಳಿಸುವಂತ ಬೇಡಿಕೆಯ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಸ್ಟ್.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವಂತ ನಿರ್ಣಯಕ್ಕೆ ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ : ಶಾಸಕ ಯತ್ನಾಳ್ ಗೆ ನೋಟಿಸ್ ಜಾರಿ