ದಾವಣೆಗೆರೆ : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ( 7th Pay Commission ) ರಚಿಸಲು ಸರ್ಕಾರ ತೀರ್ಮಾನಿಸಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಮಧ್ಯಪ್ರದೇಶ: ಕಳಪೆ ರಸ್ತೆ ಕಾಮಗಾರಿಗಾಗಿ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವ ʻನಿತಿನ್ ಗಡ್ಕರಿʼ
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರಿ ನೌಕರರು ( Karnataka Government Employees ) ತಮ್ಮ ಬೇಡಿಕೆಯಾಗಿ 7ನೇ ವೇತನ ಆಯೋಗ ರಚನೆ ಬಗ್ಗೆ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಸರ್ಕಾರ ಈ ಬೇಡಿಕೆ ಈಡೇರಿಸುವುದಾಗಿಯೂ ಭರವಸೆ ನೀಡಲಾಗಿತ್ತು. ಅದರಂತೆ ಇಂದು ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
BIGG NEWS: ಸಿಲಿಕಾನ್ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್ ಅರೆಸ್ಟ್