ಶಿವಮೊಗ್ಗ: ಜಿಲ್ಲೆಯಲ್ಲಿ ಕೊಡಚಾದ್ರಿ ಬಳಿಯಲ್ಲಿ ಜೀಪ್, ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದ ನಿಟ್ಟೂರು ಸಮೀಪದ ಕೊಡಚಾದ್ರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದಂತ ಜೀಪ್ ಗೆ ಶಿವಮೊಗ್ಗದ ಕಡೆಯಿಂದ ಸಾಗುತ್ತಿದ್ದಂತ ಟಿಟಿ ವಾಹನ ಡಿಕ್ಕಿಯಾಗಿ ಈ ಅಪಘಾತ ನಡೆದಿದೆ.
ಟಿಟಿ ಹಾಗೂ ಜೀಪ್ ನಡುವಿನ ಅಪಘಾತದಲ್ಲಿ 8 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಮ ದಾಖಲಾಗಿದೆ.
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING:ವಿರಾಟ್ ಕೊಹ್ಲಿಗೆ ಮ್ಯಾಚ್ ಅಮಾನತು ಇಲ್ಲ: ಪಂದ್ಯದ ಶುಲ್ಕದ ಶೇ.20ರಷ್ಟು ದಂಡ