ಬೆಂಗಳೂರು : ಇಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು.
ಈ ಕುರಿತಂತೆ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆಯಿತು. ಪರೀಕ್ಷೆಗೆ ಶೇ. 80 ರಷ್ಟು ಮಂದಿ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.
ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.