ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಈಗಾಗಲೇ ಅನೇಕ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
BIGG NEWS: PFI & SDPI ಸಂಘಟನೆಗಳು ಬ್ಯಾನ್ ಮಾಡಬೇಕು; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
ನಗರದಲ್ಲಿ ಮಾತನಾಡಿದ ಅವರು, ಕಳೆದ ವಾರ ಪಿಎಫ್ಐ ಮುಖಂಡರ ಮೇಲೆ ಎನ್ಐಎ ದಾಳಿ ನಡೆಸಿತ್ತು. ಇಂದು ಬೆಳಗ್ಗೆ 3 ಗಂಟೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈಗಾಗಲೇ ಸುಮಾರು 80 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ, ಕೋಮುಸೌಹಾರ್ದಕ್ಕೆ ಹಾನಿ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಈ ದಾಳಿ ನಡೆಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
BIGG NEWS: PFI & SDPI ಸಂಘಟನೆಗಳು ಬ್ಯಾನ್ ಮಾಡಬೇಕು; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
ವಶಕ್ಕೆ ಪಡೆದುಕೊಂಡ ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಸೆಕ್ಷನ್ 107 ರಡಿ ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗುವುದು. ವಶಕ್ಕೆ ಪಡೆದ ಮುಖಂಡರು ಮತ್ತು ಕಾರ್ಯಕರ್ತರು ಅಹಿತಕರ ಘಟನೆಯಲ್ಲಿ ಭಾಗಿಯಾಗಕೂಡದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಬಾಂಡ್ನಲ್ಲಿ ಬರೆಸಲಾಗುವುದು ಎಂದು ಹೇಳಿದರು.