Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿಯಲ್ಲಿ ಹಕ್ಕಿ ಜ್ವರದಿಂದ 8,000 ಕೋಳಿಗಳು ಸಾವು: ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ | Bird Flu
KARNATAKA

ಬಳ್ಳಾರಿಯಲ್ಲಿ ಹಕ್ಕಿ ಜ್ವರದಿಂದ 8,000 ಕೋಳಿಗಳು ಸಾವು: ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ | Bird Flu

By kannadanewsnow0907/03/2025 8:57 AM

ಬಳ್ಳಾರಿ : ಕೋಳಿ ಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋಳಿ ಶೀತ ಜ್ವರಕ್ಕೆ ಸಂಬAಧಿಸಿದAತೆ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು.

ಬೇಯಿಸಿ ನಂತರ ಸೇವಿಸಿ:

ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಸಾಕಾಣಿಕೆ ಮಾಡಿದ ಅಸಿಲ್ ಮತ್ತು ಕಾವೇರಿ ತಳಿಯ ಕೋಳಿಗಳಿಗೆ ಕೋಳಿ ಶೀತ ಜ್ವರ ರೋಗದ ಲಕ್ಷಣ ಕಂಡುಬAದು ಕೆಲವು ಕೋಳಿಗಳು ಮರಣ ಹೊಂದಿದ್ದವು. ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಹೆಚ್ ಮತ್ತು ವಿಬಿಗೆ ಮರಣ ಹೊಂದಿದ ಕೋಳಿಗಳ ಮಾದರಿ ಕಳುಹಿಸಲಾಗಿತ್ತು. ಫೆ.25 ರಂದು ಭೋಪಾಲ್‌ನ ಐಸಿಎಆರ್ – ರಾಷ್ಟಿçÃಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯ ಸಂಸ್ಥೆಯಿAದ ರೋಗ ದೃಢೀಕರಣವಾಗಿರುವ ವರದಿ ಬಂದ ನಂತರ ಕೋಳಿ ಶೀತ ಜ್ವರ ರೋಗೋದ್ರೇಕಗೊಂಡಿರುವ ಬಗ್ಗೆ ಘೋಷಿಸಲಾಯಿತು. ಆಗ ಮಾರ್ಗಸೂಚಿಯಂತೆ ಇರುವ 2400 ಕೋಳಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದರು.

ಫೆ.28 ರಂದು ಕಪ್ಪಗಲ್ ಗ್ರಾಮದಲ್ಲಿ ಇಂಟಿಗ್ರೇಷನ್ ಪದ್ಧತಿಯಲ್ಲಿ ಮಾಂಸದ ಕೋಳಿಗಳನ್ನು ಸಾಕಾಣಿಕೆ ಮಾಡುವ ಕೇಂದ್ರದಲ್ಲಿ ಅಸಹಜವಾಗಿ ಕೋಳಿಗಳು ಮರಣ ಹೊಂದಿದ್ದವು. ಪಶು ಪಾಲನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಒಟ್ಟು 15,000 ಕೋಳಿಗಳ ಪೈಕಿ 8,000 ಕೋಳಿಗಳು ಮರಣ ಹೊಂದಿದ್ದವು. ಮರಣ ಹೊಂದಿದ ಕೋಳಿಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಹೆಚ್ ಮತ್ತು ವಿಬಿ ಹಾಗೂ ಭೋಪಾಲ್‌ನ ಐಸಿಎಆರ್ – ರಾಷ್ಟಿçÃಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟು 74 ಮಾಂಸದ ಕೋಳಿ (ಫಾರಂ) ಹಾಗೂ 14 ಮೊಟ್ಟೆ ಕೋಳಿ ಸಾಕಾಣಿಕೆ ಕೇಂದ್ರಗಳಿವೆ ಹಾಗೂ 1,30,221 ಹಿತ್ತಲ ಕೋಳಿ ಇವೆ. ಮರಣ ಹೊಂದಿದ ಕೋಳಿಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ ಮತ್ತು ಕೋಳಿ ಶೀತ ಜ್ವರ ಕಂಡಿರುವ ಕೋಳಿ ಸಾಕಾಣಿಕೆ ಕೇಂದ್ರವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ವಾಹನಗಳ ಮತ್ತು ಸಾರ್ವಜನಿಕರ ಪ್ರವೇಶ ನಿಷೇಧಿಸಲು ಕ್ರಮವಹಿಸಲಾಗಿದೆ ಎಂದರು.

ಕಪ್ಪಗಲ್ ಗ್ರಾಮದ ಕೋಳಿ ಸಾಕಾಣಕೆ ಕೇಂದ್ರದ 1 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋಳಿ ಶೀತ ಜ್ವರದ ಬಗ್ಗೆ ಅರಿವು ಮೂಡಿಸಲು ಡಂಗುರ ಸಾರಲಾಗಿದೆ. ರಸಾಯನಿಕ ದ್ರಾವಣ ಸಿಂಪಡಿಸಿ ಸ್ಯಾನಿಟೈಜೇಷನ್ ಮಾಡಲಾಗಿದೆ. ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಇರುವ ಹಿತ್ತಲ ಕೋಳಿಗಳ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದರು.

ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ:

ಜಿಲ್ಲೆಗೆ ಬೆಂಗಳೂರಿನ ಐಎಹೆಚ್ ಮತ್ತು ವಿಬಿ ಪ್ರಯೋಗಾಲಯದ ವಿಜ್ಞಾನಿಗಳು ಮತ್ತು ಪಶುಪಾಲನಾ ಇಲಾಖೆಯ ನಿರ್ದೇಶಕರು ಭೇಟಿ ನೀಡಿ ಹಕ್ಕಿ ಜ್ವರದ ನಿಯಂತ್ರಣ ಮಾರ್ಗಸೂಚಿಯಂತೆ ಕಟ್ಟೆಚ್ಚರ ವಹಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಕ್ರಮ ಜರುಗಿಸಲು ಪಶುವೈದ್ಯಾಧಿಕಾರಿಗಳ ನೇತೃತ್ವದಲ್ಲಿ 13 ಕ್ಷೀಪ್ರ ಪ್ರತಿಕ್ರಿಯೆ ತಂಡ (ರಾಪಿಡ್ ರೆಸ್ಪಾನ್ಸ್ ಟೀಮ್) ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

ನೆರೆ ರಾಜ್ಯದಿಂದ ಕೋಳಿ ಶೀತ ಜ್ವರ ಪ್ರವೇಶವಾಗದಂತೆ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು, ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋಳಿ, ಬಾತುಕೋಳಿ, ವಲಸೆ ಬರುವ ಹಕ್ಕಿಗಳಲ್ಲಿ ಅಸಹಜ ಸಾವು ಉಂಟಾದಲ್ಲಿ ಕೂಡಲೇ ಹತ್ತಿರದ ಪಶು ವೈದ್ಯಕೀಯ ಇಲಾಖೆಗೆ ಮಾಹಿತಿ ನೀಡಬೇಕು. ಈ ಭಾಗದಲ್ಲಿ ದರೋಜಿ ಕೆರೆ ಭಾಗದಲ್ಲಿ ವಿವಿಧ ರೀತಿಯ ಪಕ್ಷಿಗಳು ವಲಸೆ ಬರುತ್ತಿರುತ್ತವೆ. ಈ ಕುರಿತು ನಿಗಾವಹಿಸಲಾಗಿದೆ ಎಂದರು.

ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ:

ಈಗಾಗಲೇ ಜಿಲ್ಲೆಯಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕಾ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣವೇ ಪಶು ಪಾಲನಾ ಇಲಾಖೆಗೆ ತಿಳಿಸುವಂತೆ ಹಾಗೂ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದರು.

ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ: ಅನ್ನ ಪ್ರಸಾದಕ್ಕೆ ಮತ್ತೊಂದು ಖಾದ್ಯ ಸೇರ್ಪಡೆ

ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM1 Min Read

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM1 Min Read

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM2 Mins Read
Recent News

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

19/03/2026 1:21 PM

​IPL 2026 ಕ್ಕೆ ಬಿಸಿಸಿಐ ಹೊಸ ರೂಲ್ಸ್: ಏನಿದು ‘3.5 ಗಂಟೆಗಳ ನಿಯಮ’? ಫ್ರಾಂಚೈಸಿಗಳಿಗೆ ಖಡಕ್ ಎಚ್ಚರಿಕೆ!

19/03/2026 1:15 PM

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಾಲಯ

19/03/2026 1:07 PM
State News
KARNATAKA

ಹುಬ್ಬಳ್ಳಿಯಲ್ಲಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಸಾವು!

By kannadanewsnow0519/03/2026 1:21 PM KARNATAKA 1 Min Read

ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಾಲ್ವರು ಕಾರ್ಮಿಕರು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಓರ್ವ ಕಾರ್ಮಿಕ…

BREAKING : ಇನ್ನೆರಡು ದಿನ ರಾಜ್ಯದಲ್ಲಿ ಭಾರಿ ಮಳೆ : 20 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ

19/03/2026 1:13 PM

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM

ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..

19/03/2026 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.