ಬೆಂಗಳೂರು: ರಾಜ್ಯಾಧ್ಯಂತ ಕೋವಿಡ್ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 826 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

BIG NEWS: ವಿಜಯಪುರದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 746, ದಕ್ಷಿಣ ಕನ್ನಡ 12, ಮೈಸೂರು 17 ಸೇರಿದಂತೆ ರಾಜ್ಯಾಧ್ಯಂತ 826 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ತಿಳಿಸಿದೆ.

BREAKING: ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಇ.ಡಿ ಸಮನ್ಸ್

ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 600 ಸೇರಿದಂತೆ ಇದುವರೆಗೆ 39,25,500 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ 6666 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

Share.
Exit mobile version