ಬೆಂಗಳೂರು: ಡಿಸೆಂಬರ್.20ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ನಿಗದಿ ಪಡಿಸಲಾಗಿದೆ. ಇಂತಹ ಸಮ್ಮೇಳನ ಪೂರ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್.20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೆಲ ದಿನಗಳ ಹಿಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್.20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿತ್ತು.
ಬರದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು. ಇದೀಗ ಡಿಸೆಂಬರ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಈ ಸಮ್ಮೇಳನಕ್ಕೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲಾಂಛನವನ್ನು ಬಿಡುಗಡೆಗೊಳಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕೃಷಿ ಸಚಿವ ಚಲುವರಾಯಸ್ವಾಮಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಉಪಸ್ಥಿತರಿದ್ದರು.
‘ಮೂಡಾ ಹಗರಣ’ ಬಯಲಿಗೆಳೆದ ‘RTI ಕಾರ್ಯಕರ್ತ’ರಿಗೆ ಸರಕಾರದಿಂದ ಕಿರುಕುಳ: ‘HDK’ ಗಂಭೀರ ಆರೋಪ
‘ಬಿಜೆಪಿ ಹಗರಣ’ಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ಡಿ.ಕೆ ಶಿವಕುಮಾರ್