ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು.
ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಾಲೂರು ಪಿಎಲ್ ಡಿ ಬ್ಯಾಂಕ್ ನ ಶ್ರೀನಿವಾಸ್, ಅಬಕಾರಿ ಇಲಾಖೆಯ ಬಾಲರಾಜ್ ಅವರು ಕೂಡ ಜೂಜಾಟದಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದಿದ್ದಾರೆ.
ಕೋಲಾರ ನಗರದ ಕಠಾರಿಪಾಳ್ಯದ ಮನೆಯೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಗಳಿಂದ 1.5 ಲಕ್ಷ ನಗರ, 1 ಕಾರು, 5 ಬೈಕ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ
BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ