ಉತ್ತರಾಖಂಡ: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವುದು ಘಟನೆ ನಡೆದಿದೆ.
ಕಾರಿನಲ್ಲಿ ಒಟ್ಟು 10 ಜನರಿದ್ದು, ಅದರಲ್ಲಿದ್ದ ಒಂದು ಹೆಣ್ಣು ಮಗುವನ್ನು ರಕ್ಷಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟವರೆಲ್ಲ ಪಂಜಾಬ್ ಮೂಲದವರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ.