BIGG NEWS : ಉತ್ತರಾಖಂಡದಲ್ಲಿ ನದಿಗೆ ಉರುಳಿದ ಕಾರು : 9 ಮಂದಿ ಸ್ಥಳದಲ್ಲೇ ಸಾವು | Car falls into river in Uttarakhand

ಉತ್ತರಾಖಂಡ: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವುದು ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು 10 ಜನರಿದ್ದು, ಅದರಲ್ಲಿದ್ದ ಒಂದು ಹೆಣ್ಣು ಮಗುವನ್ನು ರಕ್ಷಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟವರೆಲ್ಲ ಪಂಜಾಬ್​ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ.