ಶಿವಮೊಗ್ಗ: NCC ಕ್ಯಾಂಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ವಿದ್ಯಾರ್ಥಿಗಳಿಗೆ ನೀಡಲಾದ ಊಟ ಸೇವಿಸಿ, 9 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಎನ್ ಸಿಸಿ ಕ್ಯಾಂಪ್ ಆಯೋಜಿಸಲಾಗಿತ್ತು. ಈ ಕ್ಯಾಂಪ್ ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಿಂದ ಭಾಗಿಯಾಗಿದ್ದರು.
ಈ ವಿದ್ಯಾರ್ಥಿಗಳಿಗೆ ಮಾಡಿದ್ದಂತ ಅಡುಗೆಯ ಊಟ ಸೇವಿಸಿದಂತ 9 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥರಾಗಿದ್ದರು. ಅವರನ್ನು ಕೂಡಲೇ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ಪೊಲೀಸರಿಂದ ‘ರೇಣುಕಾಸ್ವಾಮಿ ಹತ್ಯೆ’ಗೂ ಮುನ್ನಾ ‘ಕಿಡ್ನ್ಯಾಪ್’ಗೆ ಬಳಸಿದ್ದ ಕಾರು ಜಪ್ತಿ