ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 9000 ಹುದ್ದೆಗಳ ಭರ್ತಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ 2000 ಹುದ್ದೆಗಳನ್ನು ತುಂಬಲಾಗಿದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9,000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. 2,000 ಹುದ್ದೆಗಳನ್ನು ಈಗಾಗಲೇ ತುಂಬಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದ್ದಾರೆ.
5,800 ಹೊಸ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದ್ದು, ಅದರಲ್ಲಿ ಈಗಾಗಲೇ 2,400 ಬಸ್ ಖರೀದಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಇಲಾಖೆಯ 9000 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
BREAKING: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಚರಣ್ ಮಾಂಝಿ’ ಆಯ್ಕೆ | Mohan Charan Majhi
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ