ಉಡುಪಿ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಆಗಿರುವ ತಾತ್ಕಾಲಿಕ ಪರಿಹಾರವಾಗಿ ತಕ್ಷಣ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
BIGG NEWS : ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ‘ಸ್ಕ್ಯಾನ್ಡ್ ಪ್ರತಿ’ ಸಮಸ್ಯೆ : ‘PU ಬೋರ್ಟ್’ನಿಂದ ‘ಸಹಾಯವಾಣಿ’ ಆರಂಭ
ಉಡುಪಿಯಲ್ಲಿ ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಳೆಹಾನಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗಿದೆ. ಪರಿಣಾಮ ಸಾಕಷ್ಟು ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು, ಇದನ್ನು ಸರಿಪಡಿಸಲು 500 ಕೋಟಿ ರೂ. ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಗಂಗಾ ನದಿಯಲ್ಲಿ ಕೊಚ್ಚಿ ಹೋದ ಕಾರು: ನಾಲ್ವರು ಯಾತ್ರಾರ್ಥಿಗಳು ಸಾವು
ಇನ್ನು ಪ್ರಕೃತಿ ವಿಕೋಪದಿಂದ ಹಾನಿಗೊಂಡ ಮನೆಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ ತಕ್ಷಣ ನೀಡಲಾಗುತ್ತಿದ್ದ ಪರಿಹಾರವನ್ನು ರಾಜ್ಯ ಸರ್ಕಾರ 10,000 ಗೆ ಏರಿಸಲಾಗಿದೆ. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುತ್ತಿದ್ದ 4 ಲಕ್ಷ ರೂ. ಪರಿಹಾರವನ್ನು 5 ಲಕ್ಷ ರೂ.ಗೆ ಏರಿಸಲಾಗಿದೆ. ಸಂಪೂರ್ಣವಾಗಿ ಹಾನಿಗೊಂಡ ಮನೆಗೆ ನೀಡಲಾಗುತ್ತಿದ್ದ 1 ಲಕ್ಷ ವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
BREAKING NEWS : ಚಾಕು ಇರಿತದಿಂದ ಗಾಯಗೊಂಡಿದ್ದ ಮಾಜಿ ಕಾರ್ಪೋರೇಟ್ ಪತಿ `ಅಯೂಬ್ ಖಾನ್’ ಸಾವು