ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಪದವಿ ಹಂತದಲ್ಲೇ `ಹಣಕಾಸು ಹೂಡಿಕೆ’ ಕಲಿಕೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ
ಇಂದು ಮತ್ತು ನಾಳೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.
Big news: ಗ್ರೀಕ್ ದ್ವೀಪದ ಸಮೋಸ್ನಲ್ಲಿ ಅಗ್ನಿಶಾಮಕ ಹೆಲಿಕಾಪ್ಟರ್ ಪತನ: ಇಬ್ಬರು ಸಿಬ್ಬಂದಿಗಳು ಸಾವು
ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಹೋಗುತ್ತಿದೆ.