ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ (Heavy Rain ). ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇರೋ ಕಾರಣ, ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ( School Holiday ) ಘೋಷಣೆ ಮಾಡಲಾಗಿದೆ.
ಭಯಾನಕ Video: ಮ್ಯಾನ್ಹೋಲ್ಗೆ ಅಡ್ಡಲಾಗಿ ಬಿದ್ದಿದ್ದ ಬ್ಯಾರಿಕೇಡ್ ಸರಿಪಡಿಸುತ್ತಿದ್ದಾಗ ಕಾರು ಹರಿದು ವ್ಯಕ್ತಿ ಸಾವು…
ಈ ಬಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ಮಾಹಿತಿ ನೀಡಿದ್ದು, ಮಳೆಯ ಪ್ರಮಾಣ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದಿನಾಂಕ 14-07-2022ರ ನಾಳೆ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಸಾಗರದ ಬಿಇಓ ಕೂಡ ಮಾಹಿತಿ ಬಿಡುಗಡೆ ಮಾಡಿದ್ದು, ಸಾಗರ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 14/07/2022 ರಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ತಹಸೀಲ್ದಾರರ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ. ನಾಳೆ ಸಾಗರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನುಳಿದ ಪಿಯು, ಪದವಿ ಸೇರಿದಂತೆ ಇತರೆ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.