ಬೆಂಗಳೂರು : ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ ಶೇ. 5 ಜಿಎಸ್ ಟಿ ವಿರೋಧಿಸಿ ನಾಳೆ ರಾಜ್ಯ ಅಕ್ಕಿ ಗಿರಣಿದಾರರ ಸಂಘವು ರಾಜ್ಯಾದ್ಯಂತ ಧರಣಿ ನಡೆಸಲು ನಿರ್ಧರಿಸಿದೆ.
ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆಯೂ ಶೇ. 5 ರಷ್ಟು ಜಿಎಸ್ ಟಿ ವಿಧಿಸಿಸಿರುವುದನ್ನು ಖಂಡಿಸಿ ಧರಣಿಗೆ ನಿರ್ಧರಿಸಲಾಗಿದೆ. ರಾಜ್ಯಾದ್ಯಂತ ನಾಳೆ ಎಲ್ಲ ಚಟುವಟಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆಯಬೇಕು. ಜಿಎಸ್ ಟಿ ಕೌನ್ಸಿಲ್ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಸಂಘಟನೆಯ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ಇನ್ನು ಕೃಷಿ ಮಾರುಕಟ್ಟೆ ವಹಿವಾಟಿನಲ್ಇ ತೊಡಗಿಸಿಕೊಂಡಿರುವ ಹಲವು ಸಂಘಟನೆಗಳು ಎಪಿಎಂಸಿ ಯಾರ್ಡ್ ಬಂದ್ ಗೆ ಕರೆ ಕೊಟ್ಟಿವೆ. ಯಶವಂತಪುರ ಎಪಿಎಂಸಿಯ ಮಾಲೀಕರು, ವರ್ತಕರು, ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಘೋಷಿಸಿವೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೆ ನಡೆಯುವ ಬಂದ್ ಗೆ ಹಲವು ಅಕ್ಕಿಗಿರಿಣಿದಾರರ ಸಂಘಗಳು ಬೆಂಬಲ ವ್ಯಕ್ತಪಡಿಸಿವೆ.
Big news: ನೇಪಾಳದ ಸಂಸತ್ತಿನಲ್ಲಿ ʻಮೊದಲ ಪೌರತ್ವ ತಿದ್ದುಪಡಿ ಮಸೂದೆʼ ಅಂಗೀಕಾರ!