ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ, ಅಲ್ಲಿ ಬಿಜೆಪಿ ಮುಖಂಡರು ಮೋಜು ಮಸ್ತಿ ಮಾಡುತ್ತಿದ್ದಾರೆ.
ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಗೋವಾದಲ್ಲಿ ಮೋಜು ಮಸ್ತಿ ಸದಸ್ಯರೊಂದಿಗೆ ಮೋಜು- ಮಸ್ತಿ ಮಾಡುತ್ತಿದ್ದಾರೆ.
ಸ್ವಿಮ್ಮಿಂಗ್ ಪೂಲ್ ನಲ್ಲಿ ಹಾಯಾಗಿ ಬಿಜೆಪಿ ಶಾಸಕರು ಮತ್ತು ಸದಸ್ಯರು ಎಂಜಾಯ್ ಮಾಡುತ್ತಿದ್ದಾರೆ. ತೇರದಾಳ ಶಾಸಕ ಸಿದ್ದು ಸವದಿ ಸಹ ಸದಸ್ಯರ ಜೊತೆಗೆ ಗೋವಾದಲ್ಲಿ ಕಾಲ ಕಳೆಯುತ್ತಿದ್ದಾರೆ.
ನಾಳೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಮತ್ತ ಸದಸ್ಯರು ಗೋವಾ ರೆಸಾರ್ಟ್ ಗೆ ತೆರಳಿದ್ದಾರೆ. ಇಲ್ಲಿ ನಿರಂತರ ಮಳೆ, ಕೃಷ್ಣಾ ನದಿ ಪ್ರವಾಹ ಭೀತಿ ಉಂಟಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿಗತಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸಭೆ ನಡೆಸಿದ್ದಾರೆ. ಆದರೆ ಸಭೆಗೆ ಗೈರಾಗಿ ಶಾಸಕ ಸಿದ್ದು ಸವದಿ ಗೋವಾದಲ್ಲಿ ಕಾಲ ಕಳೆಯುತ್ತಿದ್ದಾರೆ.