ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಡತನ ರೇಖೆಗಿಂತ ಕೆಳಗಿರುವವರು ಮೃತಪಟ್ಟಾಗ ಅಂತ್ಯಸಂಸ್ಕಾರಕ್ಕೆಂದು 5 ಸಾವಿರ ನೀಡಲಾಗ್ತಿದ್ದ ಅಂತ್ಯ ಸಂಸ್ಕಾರ ಯೋಜನೆಯನ್ನ ರದ್ದುಗೊಳಿಸಿದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Good News : ‘ಕಾಶಿ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್ : ಸಿಗಲಿದೆ 5 ಸಾವಿರ ಸಹಾಯ ಧನ : ಇಲ್ಲಿದೆ ಮಾಹಿತಿ
ಸಧ್ಯ ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಯೋಜನೆಯ ಅನುಷ್ಠಾನಕ್ಕೆ ಯಾವುದೇ ಅನುದಾನ ಲಭ್ಯವಿಲ್ಲದೇ ಕಾರಣ ಈ ಯೋಜನೆಯನ್ನ ರದ್ದುಗೊಳಿಸಿದೆ. ಅದ್ರಂತೆ, ಈ ಅಂತ್ಯಸಂಸ್ಕಾರ ಯೋಜನೆಯಡಿ 2021ರ ಆಗಸ್ಟ್ ಅಂತ್ಯಕ್ಕೆ ರಾಜ್ಯದ ಜಿಲ್ಲೆಗಳಲ್ಲಿ ಸ್ವೀಕೃತಗೊಂಡ ಅರ್ಜಿಗಳಿಗೆ ಮಾತ್ರ ಸೌಲಭ್ಯ ವಿತರಿಸಲು ಆರ್ಥಿಕ ಇಲಾಖೆ ಸೂಚನೆ ನೀಡಿದೆ.
ಅದ್ರಂತೆ ಸರ್ಕಾರದ ಕಂದಾಯ ಇಲಾಖೆ ಕಾರ್ಯದರ್ಶಿ ಜಯಲಕ್ಷ್ಮೀ, ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ 2021ರ ಆಗಸ್ಟ್ ತಿಂಗಳ ಅಂತ್ಯಕ್ಕೆ ಬಾಕಿ ಇದ್ದ ಅರ್ಜಿಗಳಿಗೆ 17.92 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ಮೂರು ತಿಂಗಳೊಳಗಾಗಿ ವಿತರಿಸಲು ರಾಜ್ಯದ ಆಯಾ ಜಿಲ್ಲಾಧಿಕಾರಿಗಳ ಪಿಡಿಪಿ ಖಾತೆಯಲ್ಲಿರಿಸಿ ಆದೇಶ ಹೊರಡಿಸಿದ್ದಾರೆ. ಅಂದ್ಹಾಗೆ, 2021-22 ನೇ ಸಾಲಿನ ಆಯ್ಯವ್ಯಯದಲ್ಲಿ ಅಂತ್ಯ ಸಂಸ್ಕಾರ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು.