ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಂತೋಷ್ ಪತ್ನಿ ಜಯಶ್ರೀ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪಾರದರ್ಶಕ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
Video: ಮಹಾರಾಷ್ಟ್ರದಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಯುವಕ ನಾಪತ್ತೆ… ಮುಂದುವರೆದ ಶೋಧ ಕಾರ್ಯ
ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜಯಶ್ರೀ, ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಈಶ್ವರಪ್ಪ 15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆಎ ಎಂದು ನೀಡಿದ್ದ ಹೇಳಿಕೆಯನ್ನು ಜಯಶ್ರೀ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Big news: ಇಂದಿನಿಂದ ʻವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ʼ ಆರಂಭ: ನೀರಜ್ ಚೋಪ್ರಾ ಮೇಲೆ ಎಲ್ಲರ ನಿರೀಕ್ಷೆ
ಕೆ.ಎಸ್. ಈಶ್ವರಪ್ಪ ಮಾಜಿ ಡಿಸಿಎಂ, ಶಾಸಕರಾಗಿದ್ದಾರೆ. ಹಣಬಲ, ರಾಜಕೀಯ ಬಲ ಬಳಸಿಕೊಂಡು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಇದೆ. ಅಧಿಕಾರಿಗಳು ಪ್ರಕರಣದ ತನಿಖೆಯ ಸೋರಿಕೆ ಮಾಡುತ್ತಿದ್ದಾರೆ. ಪಾರದರ್ಶಕ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಜಯಶ್ರೀ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
BREAKING NEWS : ಬೆಳಗಾವಿಯಲ್ಲಿ ಭಾರೀ ಮಳೆಗೆ ಮನೆಗೋಡೆ ಕುಸಿದು ಬಾಲಕ ಸಾವು