ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಿಸಲು ಚಿಂತನೆ ನಡೆಸಿದೆ.
Karnataka Weather Report : ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟ ಮಳೆರಾಯ : ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ!
ರಾಜ್ಯದ ಸರ್ಕಾರಿ ಶಾಲೆಯ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ವರ್ಷ ಟೆಂಡರ್ ಪ್ರಕ್ರಿಯೆ ವಿಳಂಬವಾದ ಕಾರಣ ಸಮವಸ್ತ್ರ ಪೂರೈಕೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ವಿದ್ಯಾರ್ಥಿಗಳಿಗೆ ಕಳೆದವರ್ಷದ ಸಮವಸ್ತ್ರದ ಜೊತೆಗೆ ಎರಡು ಜೊತೆ ಸಮವಸ್ತ್ರ ನೀಡಲು ಮುಂದಾಗಿದೆ ಎನ್ನಲಾಗಿದೆ.
Big news: ಸ್ವಂತ ಇಂಟರ್ನೆಟ್ ಸೇವೆ ಹೊಂದಿರುವ ದೇಶದ ಮೊದಲ & ಏಕೈಕ ರಾಜ್ಯ ʻಕೇರಳʼ: ಸಿಎಂ ಪಿಣರಾಯಿ ವಿಜಯನ್
ಶಾಲಾ ವಿದ್ಯಾರ್ಥಿಗಳ ಸಮವಸ್ತ್ರ ಪೂರೈಕೆಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮ ಹಾಗೂ ಖಾಸಗಿ ಕಂಪನಿಯೊಂದಕ್ಕೆ ಕಾರ್ಯದೇಶ ನೀಡಲಾಗಿದ್ದು, ಇದಕ್ಕಾಗಿ 180 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ರಾಜ್ಯದ 50,066 ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 10 ನೇ ತರಗತಿ 46.37 ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
BIGG NEWS : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಪತ್ರ ಬರೆದ ಪತ್ನಿ ಜಯಶ್ರೀ!