ಸೋನಭದ್ರ (ಉತ್ತರ ಪ್ರದೇಶ): ಇಲ್ಲಿನ ಕಲಿಯಾರಿ ಮಾರುಕಟ್ಟೆ ಪ್ರದೇಶದಲ್ಲಿ ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪತ್ರಕರ್ತರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರಾದ ಶ್ಯಾಮ್ ಸುಂದರ್ ಪಾಂಡೆ ಮತ್ತು ಲಡ್ಡು ಪಾಂಡೆ ಮಾರುಕಟ್ಟೆಯೊಂದರ ಹೋಟೆಲ್ನಲ್ಲಿ ಕುಳಿತಿದ್ದಾಗ ಮೋಟಾರ್ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಎಸ್ಎಚ್ಒ ಪ್ರಣವ್ ಶ್ರೀವಾಸ್ತವ ತಿಳಿಸಿದ್ದಾರೆ.
ಈಗಾಗಲೇ ದಾಳಿಕೋರರ ಬಂಧನಕ್ಕಾಗಿ ಪೊಲೀಸರು ತಂಡ ರಚಿಸಿದ್ದು, ತನಿಖೆ ಚುರುಕುಗೊಂಡಿದೆ. ಗಾಯಗೊಂಡ ಪತ್ರಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Video: ʻRSSʼಅನ್ನು ʻPFIʼನೊಂದಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಟ್ನಾ ಪೊಲೀಸ್ ಅಧಿಕಾರಿಗೆ ನೋಟಿಸ್
Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ