ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿನ 89 ಹಳ್ಳಿಗಳಲ್ಲಿ ಜುಲೈ.16ರ ನಾಳೆ ವಿದ್ಯುತ್ ಅದಾಲತ್ಗಳನ್ನು ಆಯೋಜಿಸಲಾಗಿದೆ.
ಈ ಕುರಿತಂತೆ ಬೆಸ್ಕಾಂ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರ ಸೂಚನೆ ಮೇರೆಗೆ ಎಲ್ಲಾ ಎಸ್ಕಾಂಗಳು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಅದಾಲತ್ ಗೆ ಜೂನ್ 18 ರಿಂದ ಚಾಲನೆ ನೀಡಿದ್ದವು. ಪ್ರತಿ ತಿಂಗಳ ಮೂರನೇ ಶನಿವಾರದಂದು ವಿದ್ಯುತ್ ಅದಾಲತ್ ನಡೆಯಲಿದ್ದು, ಜುಲೈ ತಿಂಗಳ ವಿದ್ಯುತ್ ಅದಾಲತ್ ನಾಳೆ ಬೆಸ್ಕಾಂ ವ್ಯಾಪ್ತಿಯ 89 ಹಳ್ಳಿಗಳಲ್ಲಿ ನಡೆಯಲಿದೆ ಎಂದು ತಿಳಿಸಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಜು.18ರಿಂದ ಬಿಎಂಟಿಸಿಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಂದ ಹಿಡಿದು ಬೆಸ್ಕಾಂನ ಹಿರಿಯ ಅಧಿಕಾರಿಗಳವರೆಗೆ ವಿದ್ಯುತ್ ಅದಾಲತ್ ನಲ್ಲಿ ಭಾಗವಹಿಸಿ ಗ್ರಾಮೀಣ ಗ್ರಾಹಕರ ಕುಂದು=ಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯ 4 ತಾಲೂಕುಗಳ 13 ಹಳ್ಳಿ, ಬೆಂಗಳೂರು ಗ್ರಾಮಾಂತರದ 4 ತಾಲೂಕುಗಳ 7 ಹಳ್ಳಿ, ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳ 9 ಹಳ್ಳಿ, ದಾವಣಗೆರೆ ಜಿಲ್ಲೆಯ 7 ತಾಲೂಕುಗಳ 12 ಹಳ್ಳಿ, ಕೋಲಾರ ಜಿಲ್ಲೆಯ 6 ತಾಲೂಕುಗಳ 8 ಹಳ್ಳಿ, ಚಿಕ್ಕಬಳ್ಳಾಪುರದ 6 ತಾಲೂಕುಗಳ 9 ಹಳ್ಳಿ, ರಾಮನಗರದ 4 ತಾಲೂಕುಗಳ 12 ಹಳ್ಳಿ ಮತ್ತು ತುಮಕೂರು ಜಿಲ್ಲೆಯ 10 ತಾಲೂಕುಗಳ 19 ಹಳ್ಳಿಗಳಲ್ಲಿ ಜುಲೈ 16 ರಂದು ಅದಾಲತ್ ನಡೆಯಲಿದ್ದು, ಬೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದೆ.
2022ರ ಎನ್ಐಆರ್ಎಫ್ ರ್ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ್ಯಾಂಕ್ | Kuvempu University
ಜೂನ್ 18 ರಂದು ನಡೆದ ವಿದ್ಯುತ್ ಅದಾಲತ್ ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 1142 ಮನವಿಗಳು ಸ್ವೀಕೃತಗೊಂಡಿದ್ದವು. ಅವುಗಳ ಪೈಕಿ 321 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಇನ್ನುಳಿದ 821 ಮನವಿಗಳನ್ನು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ತಿಳಿಸಿದೆ.
ಸಂತ್ರಸ್ತರಿಗೆ ವ್ಯವಸ್ಥಿತವಾಗಿ ಪರಿಹಾರ ನೀಡಿ: ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ- CM ಬಸವರಾಜ ಬೊಮ್ಮಾಯಿ