ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವದರಿಂದ ಜಿಲ್ಲಾಧಿಕಾರಿಗಳ ನಡೆ, ಹಳ್ಳೆಯ ಕಡೆ ಅಭಿಯಾನಕ್ಕೆ ಕೆಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಿನಾಯ್ತಿ ನೀಡಿ ಸರ್ಕಾರ ಆದೇಶಿಸಿದೆ.
BIG NEWS: ಕರ್ನಾಟಕದ ಐಐಎಸ್ಸಿ ಭಾರತದಲ್ಲೇ ಅತ್ಯುತ್ತಮ: ಮೈಸೂರು ವಿಶ್ವವಿದ್ಯಾಲಯ, ಮಣಿಪಾಲ್ ಅಕಾಡೆಮಿಗೂ ಸ್ಥಾನ
ಈ ಬಗ್ಗೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜರುಗಿಸಲಾಗುತ್ತಿದೆ. ಆದ್ರೇ.. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ, ನಷ್ಟದ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯಪ್ರವೃತ್ತವಾಗಿದೆ.
ಈ ಹಿನ್ನಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲು ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಹೆಚ್ಚು ಮಳೆಯಾಗುತ್ತಿರುವಂತ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ದಿನಾಂಕ 16-07-2022 ರಂದು ಜರುಗಬೇಕಾಗಿರುವ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಅಭಿಯಾನಕ್ಕೆ ಜುಲೈ ತಿಂಗಳಿನಲ್ಲಿ ವಿನಾಯ್ತಿಯನ್ನು ನೀಡಲಾಗಿದೆ ಎಂದು ಆದೇಶಿಸಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಜು.18ರಿಂದ ಬಿಎಂಟಿಸಿಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ
ಇನ್ನೂ ಈ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಯಥಾ ಪ್ರಕಾರವಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಮುಂದುವರೆಸಲು ಸೂಚಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ