ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಸಮುದಾಯದ 50 ಸಾವಿರ ಅಭ್ಯರ್ಥಿಗಳಿಗೆ ಖಾಸಗಿ ತರಬೇತಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ತರಬೇತಿ ನೀಡಲು ಅನುಮತಿಸಿದೆ. ಈ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತರಬೇತಿಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಸಂಬಂಧ ನಡವಳಿಗಳನ್ನು ಹೊರಡಿಸಿದ್ದು, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ 50,000 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತರಬೇತಿ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಈ ಯೋಜನೆಯ ಅನುಷ್ಠಾನಗೊಳಿಸಲು ಹಾಗೂ ಮೊದಲ ಹಂತದಲ್ಲಿ 15,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಷರತ್ತುಗಳೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್ಸಿ, ಕೆಎಎಸ್, ಬ್ಯಾಂಕಿಂಗ್, ಗ್ರೂಪ್-ಸಿ, ಎಸ್ಎಸ್ಸಿ, ಆರ್ ಆರ್ ಬಿ, ನ್ಯಾಯಾಂಗ ತರಬೇತಿ, ಏರ್ ಹೋಸ್ಟರ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯೋಗವಾಗುವಂತೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿವರ್ಷ ನೀಡಲಾಗುತ್ತದೆ.
ಮೊದಲ ಹಂತದಲ್ಲಿ 15,000 ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲು ಹಾಗೂ ಇದಕ್ಕೆ ತಗಲುವ ಅಂದಾಜು ವೆಚ್ಚ ರೂ.65.78 ಕೋಟಿ ಅನುದಾನವನ್ನು ಮಂಜೂರಾತಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ ಎಂದಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಜು.18ರಿಂದ ಬಿಎಂಟಿಸಿಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ