ಬೆಂಗಳೂರು : ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ `ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!
ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುತ್ತಿರುವ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.
ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವರ್ಷದಲ್ಲಿ 100 ದಿನ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಿಸಲು, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಅರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು.
BIGG NEWS : ಬಡ್ತಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಿಗೆ ಗುಡ್ ನ್ಯೂಸ್