ಚಿತ್ರದುರ್ಗ : ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಜಿಲ್ಲೆಯ ಶಾಸಕರಿಗೆ ಬೆದರಿಕೆ ಸಂದೇಶ ಬಂದಿದೆ.
ಜಿಲ್ಲೆಯ ಇಮ್ಮಡಿ ಸಿದ್ದರಾಮೇಶ್ವರ ಸ್ಮಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್, ಹಾಗೂ ಎಂ. ಚಂದ್ರಪ್ಪ ಸೇರಿ ಹಲವರ ಹತ್ಯಗೆ ಸಂಚು ರೂಪಿಸಲಾಗಿದೆ ಎಂಬ ಅರ್ಥದ ಸಂದೇಶವೊಂದು ಪೊಲೀಸರಿಗೆ ಬಂದಿದೆ.
KSP ಆ್ಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದ್ದು, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್, ಎಂ.ಚಂದ್ರಪ್ಪ ಅವರಿಗೆ ಬೆದರಿಕೆ ಹಾಕಲಾಗಿದ್ದು, ಹೊಳಲ್ಕರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅನ್ಯ ಜಾತಿಗೆ ಸೇರಿದ ಕೆಲವರು ಬೋವಿ ವಡ್ಡರ ಸಂಘದ ಹೆಸರಿನಲ್ಲಿ ಸಮುದಾಯದ ನಾಯಕರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಬೆಂಬಲಿಸುವಂತೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
BIGG NEWS : ಇಂದು ಸಿಎಂ ಬಸವರಾಜ ಬೊಮ್ಮಾಯಿ `ಹಾವೇರಿ ಜಿಲ್ಲಾ ಪ್ರವಾಸ’ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ