ಶಿವಮೊಗ್ಗ : 2022-23 ನೇ ಸಾಲಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದವರಿಗೆ ಸಾಲ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ಸುವಿಧಾ ಪೋರ್ಟಲ್ www.suvidha.karnataka.gov.in ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 24 ರೊಳಗೆ ಸಲ್ಲಿಸಬೇಕು. ವಿಶ್ವಕರ್ಮ ಮತ್ತು ಅದರ ಉಪಜಾತಿಗೆ ಸೇರಿದ 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರಿವು ಯೋಜನೆಯಡಿ ವಯೋಮಿತಿ 18 ರಿಂದ 30 ವರ್ಷಗಳ ಮಿತಿಯಲ್ಲಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದ್ದು, ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಿಗೆ ಕಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಪಟ್ಟಣ ಪ್ರದೇಶದವರಿಗೆ ರೂ.1,20,000/- ಮಿತಿಯೊಳಗಿರಬೇಕು. ಅರಿವು-ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ನವೀಕರಣ)ಗೆ ವಾರ್ಷಿಕ ವರಮಾನ ರೂ.3.50 ಲಕ್ಷ ಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗೆ www.kvcdcl.karnataka.gov.in, ಸಹಾಯವಾಣಿ 080-22374848 ಮತ್ತು 9606066389 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ , ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಿಮ್ಮ ‘ನಿವೇಶ’ನ ಕೊಳ್ಳುವ ಆಸೆಗೆ ಇಲ್ಲಿದೆ ಅವಕಾಶ: ಇಲ್ಲಿ ‘ಕಡಿಮೆ ದರ’ದಲ್ಲಿ ‘ಸೈಟ್’ಗಳು ಲಭ್ಯ