ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ 2022-23ನೇ ಸಾಲಿನ ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಉದ್ಯೋಗಿನಿ, ಕಿರುಸಾಲ ಅಭ್ಯರ್ಥಿಗಳು ಅರ್ಜಿಗಳನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಅಭ್ಯರ್ಥಿಗಳು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ದಿನಾಂಕ:30.07.2022 ರೊಳಗೆ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು (ದ್ವಿಪ್ರತಿಗಳಲ್ಲಿ) ದಿನಾಂಕ:06.08.2022ರ ಒಳಗಾಗಿ ಸದರಿ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.
ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆಯಾ ವಿಧಾನ ಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ. ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ.
BIGG NEWS : ರಾಜ್ಯದಲ್ಲಿ ‘ಅನಾವಶ್ಯಕ ವಾಹನ ತಪಾಸಣೆ’ ನಿಲ್ಲಿಸುವಂತೆ ಡಿಜಿಪಿ ಖಡಕ್ ಆದೇಶ
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೂತನ ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ದೂರವಾಣಿ ಸಂಖ್ಯೆ:08156-277111. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ. ಬಾಗೇಪಲ್ಲಿ-08150-283295, ಚಿಕ್ಕಬಳ್ಳಾಪುರ-08156-271161, ಚಿಂತಾಮಣಿ-08154-255589, ಗೌರಿಬಿದನೂರು-08155-284168, ಗುಡಿಬಂಡೆ-08156-261116, ಶಿಡ್ಲಗಟ್ಟ-08158-256497 ಅನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಗಳ ವಿವರ:
ಉದ್ಯೋಗಿನಿ ಯೋಜನೆ: 18-55 ವಯಸ್ಸಿನೊಳಗಿನ ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ರೂ.3,00,000/-ಗಳವರೆಗೆ ಬ್ಯಾಂಕ್ ಸಾಲ ಹಾಗೂ ನಿಗಮದಿಂದ ಎಸ್.ಸಿ./ಎಸ್.ಟಿ ಮಹಿಳೆಯರಿಗೆ ಶೇ.50% (ಗರಿಷ್ಟ ರೂ.1,50,000/-ಗಳ) ಸಹಾಯಧನ, ವಿಧವೆ, ಅಂಗವಿಕಲೆ, ಪರಿತೆಕ್ತೆಯರಿಗೆ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ.30% (ಗರಿಷ್ಟ ರೂ.90,000/-ಗಳ) ಸಹಾಯಧನ ನೀಡಲಾಗುವುದು.
ಕಿರುಸಾಲ ಯೋಜನೆ: ಸ್ತ್ರೀಶಕ್ತಿ ಸಂಘಗಳಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 2,00,000/-ಗಳ ಬಡ್ಡಿ ರಹಿತ ಸಾಲ ನಿಗಮದಿಂದ ನೇರವಾಗಿ ನೀಡಲಾಗುವುದು. 20 ಕಂತುಗಳಲ್ಲಿ ಸಾಲ ಮರುಪಾವತಿ ಮಾಡಬೇಕಾಗಿರುತ್ತದೆ.
ಚೇತನಾ ಯೋಜನೆ: ಲೈಂಗಿಕ ವೃತ್ತಿ ನಿರತ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ರೂ. ರೂ.30,000/-ಗಳ ಸಹಾಯ ಧನ ನೀಡಲಾಗುವುದು.
ಧನಶ್ರೀ ಯೋಜನೆ: ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ರೂ. ರೂ.30,000/-ಗಳ ಸಹಾಯ ಧನ ನೀಡಲಾಗುವುದು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಮಂಗಳಮುಖಿಯರು ಸ್ವ-ಉದ್ಯೋಗ ಕೈಗೊಳ್ಳಲು ರೂ. ರೂ.30,000/-ಗಳ ಸಹಾಯ ಧನ ನೀಡಲಾಗುವುದು.