ಕನೌಜ್ (ಉತ್ತರ ಪ್ರದೇಶ): ಅಪರಿಚಿತ ವ್ಯಕ್ತಿಗಳು ಉತ್ತರ ಪ್ರದೇಶದ ಹಳ್ಳಿಯೊಂದರ ದೇವಸ್ಥಾನದ ಕಾಂಪೌಂಡ್ನಲ್ಲಿ ಮಾಂಸದ ತುಂಡುಗಳನ್ನು ಎಸೆದಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗುಂಪೊಂದು ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಮೂರು ಮಾಂಸದ ಅಂಗಡಿಗಳಿಗೆ ಬೆಂಕಿ ಹಚ್ಚಿ ಪ್ರತಿಕಾರ ತೀರಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ಪ್ರಕಾರ, ತಾಲ್ಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ರಸೂಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಅರ್ಚಕ ಜಗದೀಶ್ ಜಾತವ್ ಅವರು ಮುಂಜಾನೆ 4 ಗಂಟೆ ಸುಮಾರಿಗೆ ದೇವಸ್ಥಾನದೊಳಗೆ ಮಾಂಸದ ತುಂಡುಗಳನ್ನು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ನಂತ್ರ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳೀಯ ಆಡಳಿತದ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ದೇವಾಲಯದ ಆವರಣದಿಂದ ಮಾಂಸದ ತುಂಡುಗಳನ್ನು ತೆಗೆದು ಕಾಂಪೌಂಡ್ ಅನ್ನು ಸ್ವಚ್ಛಗೊಳಿಸಿದರು. ಆದಾಗ್ಯೂ, ಸ್ಥಳೀಯ ಹಿಂದೂ ಸಂಘಟನೆಗಳ ಸದಸ್ಯರು ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು ಮತ್ತು ತಾಲ್ಗ್ರಾಮ್-ಇಂದ್ರಗಢ್ ರಸ್ತೆಯನ್ನು ತಡೆದರು.
ಪ್ರತಿಭಟನಾಕಾರರಿಗೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದಾಗ ಅವರು ಹಿಂತೆಗೆದುಕೊಂಡರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದರು.
ಆದ್ರೆ, ಮಧ್ಯಾಹ್ನದ ವೇಳೆಗೆ ಪ್ರತಿಭಟನಾಕಾರರ ಗುಂಪು ಮೂರು ಮಾಂಸದ ಅಂಗಡಿಗಳಿಗೆ ಬೆಂಕಿ ಹಚ್ಚಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಅಧಿಕಾರಿಗಳು ಹೆಚ್ಚುವರಿ ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.
ಪ್ರದೇಶದಲ್ಲಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ ಹೇಳಿದ್ದಾರೆ.
BREAKING NEWS : ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರಿಂದ ನಟೋರಿಯಸ್ ರೌಡಿಶೀಟರ್ ಮೇಲೆ ಫೈರಿಂಗ್!