ಬೆಂಗಳೂರು : ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿಯವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಲಿಸಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜುಲೈ 22 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ 75 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 1 ರಿಂದ 15 ರವರೆಗೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದೇವೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವ ನಿಲ್ದಾಣದಿಂದ ಸ್ವತಂತ್ರ ನಡಿಗೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಹಲವು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳಿಗೆ ಭೇಟಿ ನೀಡಲಾಗುವುದು ಎಂದು ಹೇಳಿದ್ದಾರೆ.