ಬೆಂಗಳೂರು : ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5 ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ. ಈ ಕೂಡಲೇ ಇವುಗಳ ಮೇಲಿನ ಜಿಎಸ್ಟಿ ರದ್ದುಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
BREAKING NEWS : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಮಂಡಕ್ಕಿ ಭಟ್ಟಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರಿಗೆ ಎರಡು ಹೊತ್ತಿನ ಊಟಕ್ಕೆ ಆಗುವಷ್ಟೂ ಗಳಿಕೆ ಇರುವುದಿಲ್ಲ ಎನ್ನುವ ಸಾಮಾನ್ಯ ಜ್ಞಾನ ಕೂಡ ಡಬ್ಬಲ್ ಎಂಜಿನ್ ಸರ್ಕಾರಗಳಿಗೆ ಇಲ್ಲ. ಬಿಜೆಪಿ ಸರ್ಕಾರಗಳು ಜನತೆಯನ್ನು ಶತ್ರುಗಳೆಂದು ಭಾವಿಸಿ ಕೆಲಸ ಮಾಡುತ್ತಿವೆ ಎಂಬುದಕ್ಕೆ ಇದು ಉದಾಹರಣೆ.
ಭೀಕರ ಅಪಘಾತ: ಆಂಬ್ಯುಲೆನ್ಸ್ಗೆ ಬೊಲೆರೋ ಡಿಕ್ಕಿ, ವಾರದ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿ ಸಾವು
ಮಂಡಕ್ಕಿ ಉತ್ಪಾದನೆಗೆ ತಗಲುವ ವೆಚ್ಚ, ಮಾರಾಟ ವೆಚ್ಚಕ್ಕಿಂತ ಹೆಚ್ಚಾಗಿದೆ. ಮಂಡಕ್ಕಿ ಉತ್ಪಾದಿಸಿ ಅದು ಗ್ರಾಹಕರ ಕೈಗೆ ತಲುಪುವವರೆಗೂ ಬೆಲೆಗಳ ಏರಿಳಿತ ಅತಿ ಸಾಮಾನ್ಯ ಅಗಿ ಬಿಟ್ಟಿದೆ. ಮಳೆಗಾಲದಲ್ಲಿ ಮಂಡಕ್ಕಿ ಉತ್ಪಾದನೆಗೆ ನಾನಾ ತೊಂದರೆಗಳಿವೆ. ಅಕ್ಕಿ ಒಣಗಿರುವುದಿಲ್ಲ, ಭತ್ತದ ಬೆಲೆ ಗಗನಕ್ಕೆ ಏರಿರುತ್ತದೆ. ಇಂತಹ ಸಮಯದಲ್ಲಿ ಮಂಡಕ್ಕಿ ಮೇಲೆ ಜಿಎಸ್ ಟಿ ವಿಧಿಸಿರುವುದು ರದ್ದು ಮಾಡುವಂತೆ ಕೋರಿದ್ದಾರೆ.
ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5 ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ.
ಈ ಕೂಡಲೇ ಇವುಗಳ ಮೇಲಿನ ಜಿಎಸ್ಟಿ ರದ್ದುಮಾಡುವಂತೆ @CMofKarnataka ಅವರು ಕೇಂದ್ರ @BJP4India ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸುತ್ತೇನೆ. pic.twitter.com/noaBfg0Stx— Siddaramaiah (@siddaramaiah) July 16, 2022