ಬೆಂಗಳೂರು : ಬೆಂಗಳೂರಿನಲ್ಲಿ ಆ.15ರಂದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು, ಆ.1ರಿಂದ 10ರವರೆಗೆ 75 ಕಿ.ಮೀ. ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿಯವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಆ.15ರಂದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು, ಆ.1ರಿಂದ 10ರವರೆಗೆ 75 ಕಿ.ಮೀ. ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ್ದೇವೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಸ್ವಾತಂತ್ರ್ಯ ನಡಿಗೆ ಆರಂಭವಾಗಲಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೆ ನಡಿಗೆ ಇರಲಿದೆ.
ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜುಲೈ 22 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.