ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು.
BREAKING NEWS: ವಿಜಯವಾಡದಲ್ಲಿ ದೇಶದ 2ನೇ ಡೆಡ್ಲಿ ವೈರಸ್ ಮಂಕಿಪಾಕ್ಸ್ ಪ್ರಕರಣ ದೃಢ | Monkeypox
ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದ್ರೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂಬುದಾಗಿ ಹೇಳಿದರು.
ನಾನು ಈ ಬಾರಿ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆ ಬಳಿಯ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸೋದಿಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದ್ರೂ ಸ್ವೀಕರಿಸೋದಿಲ್ಲ ಎಂಬುದಾಗಿ ಘೋಷಣೆ ಮಾಡಿದರು.
ರಾಜ್ಯದ 1,038 ಕೆರೆಗಳ ಹೂಳೆತ್ತಿ ಅಭಿವೃದ್ಧಿ ಪಡಿಸಲು ವಿಶೇಷ ಯೋಜನೆ – ಸಚಿವ ಸಿ.ಸಿ ಪಾಟೀಲ್