ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ( Karnataka Assembly Election 2023 ) ನನ್ನ ಕೊನೆಯ ಚುನಾವಣೆಯಾಗಿದೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಹೇಳಿದರು.
BREAKING NEWS: ವಿಜಯವಾಡದಲ್ಲಿ ದೇಶದ 2ನೇ ಡೆಡ್ಲಿ ವೈರಸ್ ಮಂಕಿಪಾಕ್ಸ್ ಪ್ರಕರಣ ದೃಢ | Monkeypox
ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದ್ರೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂಬುದಾಗಿ ಹೇಳಿದರು.
ನಾನು ಈ ಬಾರಿ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಆ ಬಳಿಯ ಯಾವುದೇ ಚುನಾವಣೆಯಲ್ಲಿ ನಿಲ್ಲೋದಿಲ್ಲ. ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸೋದಿಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದ್ರೂ ಸ್ವೀಕರಿಸೋದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿಯನ್ನು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ.
ರಾಜ್ಯದ 1,038 ಕೆರೆಗಳ ಹೂಳೆತ್ತಿ ಅಭಿವೃದ್ಧಿ ಪಡಿಸಲು ವಿಶೇಷ ಯೋಜನೆ – ಸಚಿವ ಸಿ.ಸಿ ಪಾಟೀಲ್