ಚಿತ್ರದುರ್ಗ: ಜಿಲ್ಲೆಯ ಸ್ವಾಮೀಜಿಗಳು ಹಾಗೂ ಇಬ್ಬರು ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಂತ ಪೊಲೀಸರು, ಇದೀಗ ಈ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರದ ವೈದ್ಯರೊಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ಮಠಗಳಲ್ಲಿ ಒಂದಾದಂತ ಬೋವಿ ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಳಲ್ಕೆರೆಯ ಶಾಸಕ ಎಂ ಚಂದ್ರಪ್ಪ ಹಾಗೂ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಜುಲೈ.14ರಂದು ಕೆ ಎಸ್ ಪಿ ಆಪ್ ಮೂಲಕ ಕೊಲೆ ಬೆದರಿಕೆ ಸಂದೇಶ ಬಂದಿತ್ತು.
BIG NEWS: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲ್ಲ – ಸಿದ್ಧರಾಮಯ್ಯ ಬಹಿರಂಗವಾಗಿ ಘೋಷಣೆ
ಈ ಸಂಬಂಧ ಸ್ವಾಮೀಜಿ ರಕ್ಷಣೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದರೇ, ಶಾಸಕ ಎಂ.ಚಂದ್ರಪ್ಪ ಹೊಳಲ್ಕೆರೆ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಬೆದರಿಕೆ ಸಂದೇಶ ಕಳುಹಿಸಿದಂತ ಚಿಕ್ಕಬಳ್ಳಾಪುರದ ವೈದ್ಯ ಡಾ.ತಿಪ್ಪೇರುದ್ರಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ – ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗವಾಗಿ ಘೋಷಣೆ
ಬಂಧಿತ ವೈದ್ಯ ಡಾ.ತಿಪ್ಪೇರುದ್ರಸ್ವಾಮಿ, ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಕ್ಲಿನಿಕ್ ಇಟ್ಟುಕೊಂಡು ಕೆಲಸ ಮಾಡುತ್ತಿದ್ದರು. ಅಲ್ಲದೇ ಅಖಿಲ ಕರ್ನಾಟಕ ಬೋವಿ ವಡ್ಡರ ಸಂಘದಲ್ಲಿ ಸಕ್ರೀಯರಾಗಿದ್ದರು ಎನ್ನಲಾಗಿದೆ. ಇದೀಗ ಕೊಲೆ ಬೆದರಿಕೆ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.