ಬೆಂಗಳೂರು: ರಾಜ್ಯದಲ್ಲಿ ಇಂದು ಸಹ ಕೊರೋನಾ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ.
BREAKING NEWS: ಚಿತ್ರದುರ್ಗದ ಸ್ವಾಮೀಜಿ, ಶಾಸಕರಿಗೆ ಕೊಲೆ ಬೆದರಿಕೆ: ಚಿಕ್ಕಬಳ್ಳಾಪುರದಲ್ಲಿ ವೈದ್ಯ ಅರೆಸ್ಟ್
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೀದರ್, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬಳ್ಳಾರಿ, ಬೆಳಗಾವಿ, ಕೋಲಾರ ಮತ್ತು ವಿಜಯಪುರ ಜಿಲ್ಲೆಯಲ್ಲಿ ತಲಾ ಐವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ.
2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ – ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗವಾಗಿ ಘೋಷಣೆ
ಬೆಂಗಳೂರು ಗ್ರಾಮಾಂತರ 11, ದಕ್ಷಿಣ ಕನ್ನಡ 16, ಧಾರವಾಡ 17, ಉತ್ತರ ಕನ್ನಡ 11, ಬೆಂಗಳೂರು ನಗರ 799 ಸೇರಿದಂತೆ ರಾಜ್ಯಾಧ್ಯಂತ 944 ಮಂದಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3986320ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 670 ಸೇರಿದಂತೆ 3938620 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 7569 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.