ಧಾರವಾಡ : ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ.
‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ
ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು . ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು.
ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ(VDA) ಮುಂದೂಡಿಕೆ ಆದೇಶ ‘ಸರ್ಕಾರ ವಾಪಾಸ್’
ಉಭಯ ಪಕ್ಷಗಾರರ ಸಂಬಂಧಿಕರು , ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ . ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ,ಮುಂದಿನ ದಾಂಪತ್ಯ ಜೀವನ , ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಇಟ್ಟುಕೊಂಡು ರಾಜಿ ಮಾಡಿಕೊಂಡರು.
ಚಿತ್ರದುರ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು
ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪಿ . ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು . ನ್ಯಾಯಾಧೀಶರುಗಳು ದಂಪತಿಗಳು ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.ದಂಪತಿಗಳು ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.