ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ 82 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ 82 ಆಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುತ್ತದೆ. ರೈತರಿಗೆ, ಜಾನುವಾರು ಸಾಕಾಣಿದಾರರಿಗೆ ಅನುಕೂಲ ಕಲ್ಪಿಸಿಕೊಡಲು ಜಾನುವಾರುಗಳ ಸಂರಕ್ಷಣೆ, ಪಾಲನೆ, ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿದೆ ಎಂದರು.
Good News : ಶಿಕ್ಷಣ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : FDAಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ
ಸಂಚಾರಿ ಚಿಕಿತ್ಸಾ ವಾಹನಗಳ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟೆರ್ ಸ್ಥಾಪಿಸಲಾಗಿದ್ದು, ರೈತರಿಂದ 8277100200 1962 ಕ್ಕೆ ಕರೆ ಬಂದ ತಕ್ಷಣ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ಚಿಕಿತ್ಸಾ ವಾಹನದಲ್ಲಿ ಪಶು ವೈದ್ಯ, ಪಶು ಸಹಾಯಕ ಮತ್ತು ವಾಹನ ಚಾಲಕ ಇರುತ್ತಾರೆ ಎಂದು ತಿಳಿಸಿದ್ದಾರೆ.