ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದತ್ತು ನೀಡುವ ನೆಪದಲ್ಲಿ ಗ್ರಾಹಕರಿಗೆ ನವಜಾತ ಶಿಶುಗಳ ಮಾರಾಟ: ದೆಹಲಿಯಲ್ಲಿ ಕತರ್ನಾಕ್ ಗ್ಯಾಂಗ್ ಅರೆಸ್ಟ್
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಶೀಘ್ರ ಪರಿಹಾರ : ಕಂದಾಯ ಸಚಿವ ಆರ್.ಅಶೋಕ್
ಇಂದು ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಳವಾಗುವ ಸಾಧ್ಯತೆಯಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.