ಬೆಂಗಳೂರು : ಮೈಸೂರು ದಸರಾ ಮಹೋತ್ಸವ 2022 ರ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಸರಾ ಮಹೋತ್ಸವ ಕುರಿತಂತೆ ಸಭೆ ನಡೆಸಲಿದ್ದು, ಇಂದು ಉನ್ನತ ಮಟ್ಟದ ಸಭೆಯಲ್ಲಿ ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಡಿಸಿ ಭಾಗಿಯಾಗಲಿದ್ದಾರೆ.
Good News : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಉತ್ಪನ್ನ’ಗಳ ದರ ಇಳಿಕೆ | Nandini Product Price
ಈ ಬಾರಿ ಮೈಸೂರು ದಸರಾ ಮಹೋತ್ಸವ ಹೇಗೆ ನಡೆಸಬೇಕು? ಮೈಸೂರು ದಸರಾ ಉದ್ಘಾಟಕರಾಗಿ ಯಾರನ್ನು ಆಹ್ವಾನಿಸಬೇಕು ಎಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎನ್ನಲಾಗಿದೆ.